KUIDFC : ವಿವಿಧ ಹುದ್ದೆಗಳ ನೇಮಕಾತಿಯ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ವಿಸ್ತರಣೆ , ಹೆಚ್ಚಿನ ಮಾಹಿತಿ ಇಲ್ಲಿದೆ – ಸುದ್ದಿಜಾಲ ನ್ಯೂಸ್

By | 21/12/2021

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿ 30 ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗೆ ಈ ಮೊದಲೇ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಜಿ ಸಲ್ಲಿಸಲು 31-12-2021 ಕಡೆಯ ದಿನಾಂಕವಾಗಿತ್ತು. ಈಗ ಸಂಸ್ಥೆಯು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಮುಂದೂಡಿದೆ.

ಮುಂದೂಡಿದ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ : 06-01-2022

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ ವಿಶ್ವವಿದ್ಯಾಲಯದಿಂದ 12 ನೇ ತರಗತಿ, ಪದವಿ, ಬಿಇ, ಬಿಕಾಂ, ಬಿಬಿಎಂ, ಪಿಯುಸಿ, ಎಂಬಿಎ, ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ : ಮೇಲಿನ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ವಿವಿಧ ಹುದ್ದೆಗಳಿಗೆ ಕನಿಷ್ಠ 25 ರಿಂದ ಗರಿಷ್ಠ 62 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ, 06 , 2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ನೋಟಿಫಿಕೇಶನ್

Leave a Reply

Your email address will not be published. Required fields are marked *