ಬುಡಕಟ್ಟು ಸಂಬಂಧಿ ಸಚಿವಾಲಯವು, ಏಕಲವ್ಯ ಮಾದರಿ ವಸತಿ ಶಾಲೆಗಳ (ಇಎಂಆರ್‌ಎಸ್) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 30, ಎಪ್ರಿಲ್ 2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ : 01-04-2021
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆಯ ದಿನಾಂಕ : 30-04-2021
ಸ್ಪರ್ಧಾತ್ಮ ಪರೀಕ್ಷೆ ದಿನಾಂಕ : ಜೂನ್ ಮೊದಲ ವಾರ
ಹುದ್ದೆ : ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಪೋಸ್ಟ್ ಗ್ರಾಜ್ಯುಯೇಟ್ ಟೀಚರ್, ಟ್ರೈನ್ಡ್ ಗ್ರಾಜ್ಯುಯೇಟ್ ಟೀಚರ್ ಸೇರಿದಂತೆ ಒಟ್ಟು 17 ವಿವಿಧ ಪೋಸ್ಟ್‌ಗಳಿಗೆ 3479 ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆಯನ್ನು ಹೊರಡಿಸಲಾಗಿದೆ.
ಹುದ್ದೆಗಳ ವಿವರ ಈ ಕೆಳಗಿನಂತಿವೆ:
ಪ್ರಾಂಶುಪಾಲರು – 175
ಉಪಪ್ರಾಂಶುಪಾಲರು- 116
ಪಿಜಿಟಿ ಹುದ್ದೆಗಳು- 1244
ಟಿಜಿಟಿ ಹುದ್ದೆಗಳು-1944
ವಿದ್ಯಾರ್ಹತೆ : ಹುದ್ದೆಗಳಿಗನುಸಾರವಾಗಿ ಪಿಯುಸಿ/ಪದವಿ/ಸ್ನಾತಕೋತ್ತರ ಪದವೊ/ ಬಿ.ಇಡಿ/ಎಂ.ಇಡಿ ತೇರ್ಗಡೆ ಹೊಂದಿರಬೇಕು.
ಸದರಿ ಹುದ್ದೆಗಳನ್ನು ಪ್ರತಿ ರಾಜ್ಯದಲ್ಲಿನ ಏಕಲವ್ಯ ಮಾದರಿ ವಸತಿ ಶಾಲೆಗಳ್ಲಿ ಬುಡಕಟ್ಟು ಸಂಬಂಧಿ ಸಚಿವಾಲಯದ ವತಿಯಿಂದ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
ಅಧಿಕೃತ ವೆಬ್‌ಸೈಟ್ ಲಿಂಕ್ ಗಾಗಿ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ









Got a Questions?
Find us on Socials or Contact Us and we’ll get back to you as soon as possible.