ನರೇಗಾ ಯೋಜನೆಯಡಿಯಲ್ಲಿ 35 ವಿವಿಧ ಹುದ್ದೆ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ- ಸುದ್ದಿಜಾಲ ನ್ಯೂಸ್

By | 17/12/2021

ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಂ.ಜಿ‌ ನರೇಗಾ ಸಾಮಾಜಿಕ ಪರಿಶೋಧನಾ ಸಂಘಕ್ಕೆ ( ಮಹಾತ್ಮಾ ಗಾಂಧಿ ನರೇಗಾ ಯೋಜನೆ ) ಅಗತ್ಯವಿರುವ ಈ ಕೆಳಕಂಡ ಹುದ್ದೆಯ ಸೇವೆಗಾಗಿ ಗುತ್ತಿಗೆ ಆಧಾರದ ಮೇಲೆ ಒಂದಯ ವರ್ಷದ ಅವಧಿಗೆ ನೇಮಕ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಯ ಹೆಸರು : ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ – 01 ಹುದ್ದೆ

ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ – 34 ಹುದ್ದೆಗಳು

ವಯೋಮಿತಿ : ಜಿಲ್ಲಾ ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 40 ವರ್ಷ ವಯೋಮಿತಿ ಹೊಂದಿರಬೇಕು. ( ಕರ್ತವ್ಯ ನಿರತ ತಾಲ್ಲೂಕು ಸಂಯೋಜಕರಿಗೆ 2 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುವುದು )

ತಾಲ್ಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಈ ಹುದ್ದೆಗೆ ಅರ್ಜಿ ಸಲ್ಲಿಸುವವರು 35 ವರ್ಷ ವಯೋಮಿತಿ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-01-2022 ಸಂಜೆ 5:30 ರೊಳಗೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಬಹುದು.

ನೋಟೊಫಿಕೇಶನ್

Leave a Reply

Your email address will not be published. Required fields are marked *