Onion juice benefits: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿ ಈರುಳ್ಳಿ ಜ್ಯೂಸ್‌, ಏನೆಲ್ಲ ಪ್ರಯೋಜನಗಳಿವೆ?

By | 04/09/2021

ಈರುಳ್ಳಿ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಇದು ನಮ್ಮ ದೇಹದ ಆರೋಗ್ಯಕ್ಕೆ ಹಾಗೂ ಕೂದಲಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಈರುಳ್ಳಿಯಲ್ಲಿ ಫೈಬರ್, ಕ್ಯಾಲ್ಸಿಯಂ, ಮೆಗ್ನೀಷಿಯಂ, ಸೋಡಿಯಂನಂತಹ ಪೋಷಕಾಂಶಗಳಿವೆ.

ಅನೇಕ ಜನರು ಸಲಾಡ್ ರೂಪದಲ್ಲಿ ಈರುಳ್ಳಿಯನ್ನು ಸೇವಿಸುತ್ತಾರೆ. ಆದರೆ ಈರುಳ್ಳಿ ರಸವನ್ನು ಸಹ ಸೇವಿಸಬಹುದು ಮತ್ತು ಅದು ನಮ್ಮ ಆರೋಗ್ಯಕ್ಕೆ ತುಂಬಾ ಹಿತಕಾರಿಯಗಿದೆ ಎಂಬ ಸಂಗತಿ ನಿಮಗೆ ತಿಳಿದಿದೆಯೇ? ಈರುಳ್ಳಿಯನ್ನು ನಾವು ಯಾವುದೇ ಸಮಯದಲ್ಲಿ ಸೇವಿಸಬಹುದು, ಆದರೆ ನಾವು ಖಾಲಿ ಹೊಟ್ಟೆಯಲ್ಲಿ ಈರುಳ್ಳಿ ರಸವನ್ನು ಕುಡಿದರೆ, ಅದು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಸಾಬೀತಾಗುತ್ತದೆ. ಬರಿ ಈರುಳ್ಳಿ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ಎಂಬುದನ್ನು ತಿಳಿದುಕೊಳ್ಳೋಣ.

ಖಾಲಿ ಹೊಟ್ಟೆಯಲ್ಲಿ ಈರುಳ್ಳಿ ರಸವನ್ನು ಕುಡಿಯುವುದರಿಂದ ಆಗುವ ಪ್ರಯೋಜನಗಳು
ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ
ದುರ್ಬಲ ರೋಗನಿರೋಧಕ ಶಕ್ತಿಯಿಂದಾಗಿ, ಜನರು ಆಗಾಗ್ಗೆ ಅನಾರೋಗ್ಯಕ್ಕೆ ಒಳಗಾಗುತ್ತಾರೆ. ಈರುಳ್ಳಿ ರಸದಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಸಿ ಹೇರಳ ಪ್ರಮಾಣದಲ್ಲಿರುತ್ತವೆ, ಅದು ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ನಾವು ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಈರುಳ್ಳಿ ರಸ ಸೇವಿಸಬಹುದು.

ತೂಕ ನಿಯಂತ್ರಣಕ್ಕೆ ಸಹಕಾರಿ
ಈರುಳ್ಳಿ ರಸವು ಒಂದು ಕೊಬ್ಬಿನಂಶ ಮುಕ್ತ ಪಾನೀಯವಾಗಿದೆ.ಇದರಲ್ಲಿ ತುಂಬಾ ಕಡಿಮೆ ಕ್ಯಾಲೋರಿಗಳಿರುತ್ತವೆ. ಇದಲ್ಲದೆ, ಈರುಳ್ಳಿ ರಸವನ್ನು ಕುಡಿಯುವುದು ನಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಚಯಾಪಚಯ ಕ್ರಿಯೆಗೆ ಬಲ ಸಿಗುತ್ತದೆ. ಇದರಿಂದಾಗಿ ತೂಕ ಕಳೆದುಕೊಳ್ಳಲು ಇದು ನಮಗೆ ಸಹಾಯ ಮಾಡುತ್ತದೆ.

ರಕ್ತದೊತ್ತಡ ನಿಯಂತ್ರಣ
ಈರುಳ್ಳಿ ರಸವು ಕ್ವೆರ್ಸೆಟಿನ್ ಎಂಬ ಫ್ಲೇವನಾಯ್ಡ್ ಅನ್ನು ಹೊಂದಿರುತ್ತದೆ, ಇದು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ. ಇದರಿಂದಾಗಿ ಅದು ನಮ್ಮ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಹೊಟ್ಟೆಗೆ ಲಾಭಕಾರಿಯಾಗಿದೆ
ಈರುಳ್ಳಿ ರಸವು ಕರುಳಿನ ಮೈಕ್ರೋಬಯೋಟಾಕ್ಕೆ ಬಹಳ ಪ್ರಯೋಜನಕಾರಿಯಾದ ಇನ್ಯುಲಿನ್ ಸಂಯುಕ್ತಗಳನ್ನು ಹೊಂದಿದೆ. ಇದನ್ನು ಸೇವಿಸುವುದರಿಂದ ನಮ್ಮ ಜೀರ್ಣಕ್ರಿಯೆ ಸುಧಾರಿಸುತ್ತದೆ.

Leave a Reply

Your email address will not be published. Required fields are marked *