ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ

By | 29/07/2021

ಸಾರ್ವಜನಿಕ ಶಿಕ್ಷಣ ಇಲಾಖೆ 2021-22 ನೇ ಸಾಲಿನ ‘ ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ತಾಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಮೂರು ಸಮಿತಿಗಳನ್ನು ರಚಿಸಿ, ಪ್ರಶಸ್ತಿಗೆ ಶಿಕ್ಷಕರನ್ನು ಆಯ್ಕೆ ಮಾಡಲಾಗುತ್ತದೆ. ಈ ಬಾರಿ ಆಯ್ಕೆ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್ಲೈನ್ ಮೂಲಕವೇ ನಡೆಸಲಾಗುವುದು.

ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕನಿಷ್ಠ 10 ವರ್ಷ ಶಿಕ್ಷಕರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪಡೆದ ಶಿಕ್ಷಕರು ಅರ್ಜಿ ಸಲ್ಲಿಸುವಂತಿಲ್ಲ ಎಂದು ಇಲಾಖೆ ಸ್ಪಷ್ಟ ಪಡಿಸಿದೆ.

ಅರ್ಜಿ ಸಲ್ಲಿಕೆಗೆ ಆ.10 ಕಡೆಯ ದಿನಾಂಕವಾಗಿದ್ದು, ಪ್ರಶಸ್ತಿಗಳನ್ನು ಸೆ.5 ರ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್‌ www.schooleducation.kar.nic.in ಗೆ ಭೇಟಿ ನೀಡಬಹುದು ಎಂದು ತಿಳಿಸಲಾಗಿದೆ.

ಸೇವಾ ಸೌಲಭ್ಯಕ್ಕೆ ಆನ್ಲೈನ್ ಮೂಲಕವೇ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಶಿಕ್ಷಕರು ಮತ್ತು ಸಿಬ್ಬಂದಿ ಎಲ್ಲರೂ ತಮ್ಮ ಸೇವಾ ಸೌಲಭ್ಯಗಳನ್ನು ಪಡೆಯಲು ಆ.2 ರಿಂದ ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಭೌತಿಕ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ ಎಂದು ಇಲಾಖೆಯು ಸ್ಪಷ್ಟ ಪಡಿಸಿದೆ.

‘ ಶಿಕ್ಷಕ ಮಿತ್ರ’ ಮೊಬೈಲ್ ಆ್ಯಪ್ ಮೂಲಕ ರಜಾ ಅರ್ಜಿ, ಪ್ರಥಮ ವೇತನ, ಪ್ರಮಾಣ ಪತ್ರ, ಪ್ರಭಾರ ಭತ್ಯೆ, ಅಂಗವಿಕಲ ಭತ್ಯೆ, ಮಿತ ಕುಟುಂಬ, ಯೋಜನಾ ಭತ್ಯೆ, ಜೆಪಿಎಫ್ ಮುಂಗಡ ಸೇರಿ ಎಲ್ಲಾ ರೀತಿಯ ಸೌಲಭ್ಯ ಪಡೆಯಲು ಈ ಆ್ಯಪ್ ಮೂಲಕವೇ ಅರ್ಜಿ ಸಲ್ಲಿಸಬಹುದು.

Leave a Reply

Your email address will not be published. Required fields are marked *