ಶೀಘ್ರವೇ 2,318 ಗ್ರಾ.ಪಂ, ಪಿಡಿಒ, ಕಾರ್ಯದರ್ಶಿಗಳ ಹುದ್ದೆಗಳ ನೇಮಕಾತಿ- ಸುದ್ದಿಜಾಲ ನ್ಯೂಸ್

By | 18/12/2021

ರಾಜ್ಯ ಸರಕಾರವು ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದೆ. ಶೀಘ್ರವೇ ರಾಜ್ಯದಲ್ಲಿ 2,318 ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ( PDO) ಮತ್ತು ಕಾರ್ಯದರ್ಶಿಗಳ ಹುದ್ದೆಗಳನ್ನು ಭರ್ತಿ ಮಾಡಲಾಗುವುದರ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಗ್ರಾಮಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳ 2,318 ಹುದ್ದೆಗಳು ಖಾಲಿ ಇದ್ದು, 727 ಪಿಡಿಒಗಳು, 635 ಕಾರ್ಯದರ್ಶಿ ಗ್ರೇಡ್ – 1 ಮತ್ತು 856 ಕಾರ್ಯದರ್ಶಿ ಗ್ರೇಡ್ 2 ಹುದ್ದೆಗಳು ಖಾಲಿ ಇವೆ.

ಈ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಕೆಲವು ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಸಲಿದೆ ಎಂದು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *