ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ : ಪಿಹೆಚ್‌ಡಿ ಪ್ರವೇಶಾತಿ ಪರಿಷ್ಕೃತ ಅಧಿಸೂಚನೆ

By | 23/06/2021

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಇಲ್ಲಿ ಶೈಕ್ಷಣಿಕ ವರ್ಷ 2020-21 ನೇ ಸಾಲಿಗೆ ನಡೆಯಬೇಕಾಗಿದ್ದ ಪಿಹೆಚ್‌ಡಿ ಪ್ರವೇಶ ಪರೀಕ್ಷೆಗಳನ್ನು ಕೋವಿಡ್ -19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಕಾರಣದಿಂದ, ಸ್ನಾತಕೋತ್ತರ ಕೇಂದ್ರಗಳಾದ ವಿಜಯಪುರ, ಬಾಗಲಕೋಟ, ಜಮಖಂಡಿ ಮತ್ತು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ವಿವಿಧ ವಿಭಾಗದಲ್ಲಿ ಪಿಹೆಚ್‌ಡಿ ಅಧ್ಯಯನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈಗಾಗಲೇ 2020-21 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ವೆಬ್ಸೈಟ್ ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅರ್ಜಿ ನಮೂನೆಯೊಂದಿಗೆ ಸಂಬಂಧಿಸಿದ ದಾಖಲೆಗಳನ್ನು ಹಾಗೂ ಡಿ.ಡಿ/ ಚಲನ್ ಲಗತ್ತಿಸಿ , ಆಯಾ ವಿಭಾಗದ ಮುಖ್ಯಸ್ಥರಿಗೆ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು.

ಹೆಚ್ಚಿನ ವಿವರ ಹಾಗೂ ಕಾಲಕಾಲಕ್ಕೆ ಹೊರಡಿಸುವ ಸದರಿ ವಿಷಯಕ್ಕೆ ಸಂಬಂಧಿಸಿದ ಸುತ್ತೋಲೆಗಳಿಗಾಗಿ ವಿಶ್ವವಿದ್ಯಾಲಯದ ವೆಬ್ಸೈಟ್ www.rcub.ac.in ನ್ನು ವೀಕ್ಷಿಸಬಹುದು.