ವಿಧಾನಪರಿಷತ್ತಿನಲ್ಲಿ ಜೆಡಿಎಸ್ ಸದಸ್ಯ ಕೆ.ಟಿ ಶ್ರೀಕಂಠೇಗೌಡರ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವ ಆರ್.ಅಶೋಕ್ ಅವರು ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 5689 ಹುದ್ದೆಗಳನ್ನು ಹಂತಹಂತವಾಗಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ತಹಶಿಲ್ದಾರರು ಗ್ರೇಡ್ 1-27, ಗ್ರೇಡ್ 2 -135, ಶಿರಸ್ತೇದಾರ್ ಮತ್ತು ಉಪತಹಶೀಲ್ದಾರ್ 160, ಗ್ರಾಮ ಲೆಕ್ಕಿಗರು 1792 ಹುದ್ದೆ ಸೇರಿದಂತೆ 5689 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದರು.
ಭೂಮಾಪನ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ 2540 ಹುದ್ದೆ, ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ 694 ಹುದ್ದೆ ಖಾಲಿ ಇದ್ದು, ಇವುಗಳಿಗೆ ನೇಮಕಾತಿ ನಡೆಯಲಿದೆ. ಕೊರೊನಾ ಕಾರಣದಿಂದ ಎಲ್ಲ ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ತಡೆ ನೀಡಲಾಗಿತ್ತು. ಈಗ ಸರಕಾರದಿಂದ ಸೂಚನೆ ನೀಡಲಾಗಿದ್ದು, ಆರ್ಥಿಕ ಇಲಾಖೆಯ ಸಮ್ಮತಿಯೊಂದಿಗೆ ಹಂತಹಂತವಾಗಿ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.









Got a Questions?
Find us on Socials or Contact Us and we’ll get back to you as soon as possible.