ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ರಚನೆಯನ್ನು 10 ದಿನದೊಳಗಾಗಿ ರಚಿಸಲಾಗುವುದು. ಕಾಯಂ ಕಾರ್ಯದರ್ಶಿ ನೇಮಕ ಮಾಡುವ ಜೊತೆಗೆ 20 ಸಾವಿರ ನೇರ ನೇಮಕಾತಿ ಹುದ್ದೆ ಭರ್ತಿಗ ಒಪ್ಪಿಗೆ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹಣಕಾಸು ಇಲಾಖೆ ನಿರ್ಬಂಧ ತೆರವುಗೊಳಿಸಿ ಆಡಳಿತಾತ್ಮಕ ದೃಷ್ಟಿಯಿಂದ ಇಂಜಿನಿಯರ್ ಹುದ್ದೆಗಳ ಭರ್ತಿ ಮಾಡಲಾಗುತ್ತದೆ. 20,000 ನೇರ ನೇಮಕಾತಿ ಹುದ್ದೆಗಳ ಭರ್ತಿಗೆ ಒಪ್ಪಿಗೆ ನೀಡಲಾಗುವುದು.
ಐಟಿ ಪಾರ್ಕ್, ಟೆಕ್ಸ್ಟೈಲ್ ಪಾರ್ಕ್ ಪುನರಾರಂಭಕ್ಕೆ ಸೂಚಿಸಿದ್ದು, ಹಲವು ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಹೇಳಿದ್ದಾರೆ.
13,000 ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭವಾಗಿದ್ದು, 6779 ಶಿಕ್ಷಕರ ಹುದ್ದೆಗಳ ಭರ್ತಿಗ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.









Got a Questions?
Find us on Socials or Contact Us and we’ll get back to you as soon as possible.