ಕಡ್ಡಾಯ ಶಿಕ್ಷಣ ಕಾಯ್ದೆಯಡಿ ಆಯ್ಕೆಯಾದ ಮಕ್ಕಳನ್ನು ಆ.3 ರೊಳಗೆ ದಾಖಲಿಸಲು ಶಿಕ್ಷಣ ಇಲಾಖೆ ಸೂಚನೆ

ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆಯ್ಕೆಯಾದ ಮಕ್ಕಳನ್ನು ಆ‌.3 ರೊಳಗೆ ಸಂಬಂಧಪಟ್ಟ ಶಾಲೆಗಳಿಗೆ ದಾಖಲು ಪಡಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಕೋರಿದೆ.

ಖಾಸಗಿ ಅನುದಾನಿತ ಹಾಗೂ ಅನುದಾ‌ನರಹಿತ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕಾಗಿ 6776 ಅರ್ಜಿ ಪರಿಗಣಿಸಿ ಜು.22 ರಂದು ಎರಡನೇ ಸುತ್ತಿನ ಲಾಟರಿಯನ್ನು‌ ಆನ್ಲೈನ್ ಮೂಲಕ ನಡೆಸಲಾಗಿದೆ. ಈ ಪ್ರಕ್ರಿಯೆಯಲ್ಲಿ 764 ಮಂದಿ ಮಕ್ಕಳನ್ನು ಆಯ್ಕೆ ಮಾಡಲಾಗಿದೆ.

ಸೀಟು ಹಂಚಿಕೆಯ ಮಾಹಿತಿಯನ್ನು ಆಯ್ಕೆಯಾದ ಮಕ್ಕಳ ಪೋಷಕರ ನೋಂದಾಯಿತ ಮೊಬೈಲ್ ಸಂಖ್ಯೆ ಗೆ ಕಳುಹಿಸಲಾಗಿದೆ.

error: Content is protected !!