ಶಿಷ್ಯವೇತನ ಯೋಜನೆ : ಸಚಿವ ಸಂಪುಟದ ನಿರ್ಧಾರ

By | 10/09/2021

ಸಚಿವ ಸಂಪುಟದ ನಿರ್ಣಯ ಹಿನ್ನೆಲೆಯಲ್ಲಿ ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸಲು ಹೊಸ ಶಿಷ್ಯವೇತನ (scholarship) ಯೋಜನೆಯನ್ನು ಜಾರಿಗೆ ತರುವ ಬಗ್ಗೆ ಚರ್ಚಿಸಲಾಯಿತು. ಹಾಗಾಗಿ ರೈತರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣಕ್ಕೆ ಒತ್ತುಕೊಡಲು ಮತ್ತು ಪ್ರೋತ್ಸಾಹಿಸಲು ರೂಪಾಯಿ ಒಂದು ಸಾವಿರ ಕೋಟಿಗಳ ಹೆಚ್ಚುವರಿ ವೆಚ್ಚದಲ್ಲಿ ಒಂದು ಹೊಸ ಶಿಷ್ಯ ವೇತನ ಯೋಜನೆಯನ್ನು ಜಾರಿಗೆ ತರಲು ಸಚಿವ ಸಂಪುಟ ನಿರ್ಧರಿಸುತ್ತದೆ. ಅದರಂತೆ ಎಸ್ ಎಸ್ ಎಲ್ ಸಿ ಅಥವಾ 10 ನೇ ತರಗತಿಯನ್ನು ಪೂರ್ಣಗೊಳಿಸಿದ ನಂತರ ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ , ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು/ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಗಳವರೆಗೆ ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯದ ರೈತರ ಎಲ್ಲಾ ಮಕ್ಕಳ ಬ್ಯಾಂಕ್ ಗಳ ಖಾತೆಗಳಿಗೆ ನೇರ ನಗದು ವರ್ಗಾವಣೆ ಪದ್ಧತಿಯ ಮೂಲಕ 2021-22 ನೇ ಆರ್ಥಿಕ ವರ್ಷದ ಸಾಲಿನಿಂದ ಜಾರಿಗೆ ಬರುವಂತೆ ಈ ಮುಂದಿನ ಪಟ್ಟಿಯಲ್ಲಿ ವಿವರಿಸಿರುವಂತೆ ಶಿಷ್ಯವೇತನದ ಹಣದ ಮೊತ್ತವನ್ನು ವಾರ್ಷಿಕ ಶಿಷ್ಯವೇತನ ರೂಪದಲ್ಲಿ ಒದಗಿಸಲು ಮತ್ತು ಪಾವತಿಸಲು ಸರಕಾರದ ಅನುಮೋದನೆಯನ್ನು ನೀಡಲಾಗಿದೆ.

ಪದವಿಯ ಮುಂಚೆ ಪಿಯುಸಿ/ಐಟಿಐ/ಡಿಪ್ಲೊಮಾ – ರೂ.2500/-( ಹುಡುಗರು/ಪುರುಷರು) ರೂ.3000/- ( ಹುಡುಗಿಯರು /ಅನ್ಯ ಲಿಂಗದವರು)

ಎಲ್ಲಾ ಬಿಎ/ ಬಿಎಸ್ಸಿ/ಬಿಕಾಂ/ ಇತ್ಯಾದಿ. ಎಂಬಿಬಿಎಸ್/ಬಿಇ/ಬಿಟೆಕ್ ಮತ್ತು ವೃತ್ತಿಪರ ಕೋರ್ಸ್ ಗಳನ್ನು ಹೊರತು ಪಡಿಸಿ – ರೂ. 5000/- (ಹುಡುಗರು/ ಪುರುಷರು) ರೂ. 5,500/- ( ಹುಡುಗಿಯರು/ ಅನ್ಯ ಲಿಂಗದವರು)

ಎಲ್ ಎಲ್ ಬಿ/ ಪ್ಯಾರ ಮೆಡಿಕಲ್/ ಬಿ ಫಾರ್ಮ್/ ನರ್ಸಿಂಗ್ ಇತ್ಯಾದಿ. ವೃತ್ತಿಪರ ಕೋರ್ಸ್ ಗಳು – ರೂ.7500/- ( ಹುಡುಗರು/ಪುರುಷರು), ರೂ. 8000/-( ಹುಡುಗಿಯರು/ ಅನ್ಯ ಲಿಂಗದವರು)

ಎಂಬಿಬಿಎಸ್/ಬಿಇ/ಬಿಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್ ಗಳು- ರೂ.10,000/- ( ಹುಡುಗರು/ ಪುರುಷರು), ರೂ. 11,000/-( ಹುಡುಗಿಯರು/ಅನ್ಯ ಲಿಂಗದವರು)

ಶಿಷ್ಯವೇತನಕ್ಕೆ ಈ ಕೆಳಕಂಡ ಅರ್ಥವಿವರಣೆಗಳನ್ನು ಪರಿಗಣಿಸತಕ್ಕದ್ದು;

ರೈತ ಎಂದರೆ ರಾಜ್ಯದ ಯಾವುದೇ ಭಾಗದಲ್ಲಿ ಉಳುಮೆ ಮಾಡುವಂತಹ/ ಕೃಷಿ ಮಾಡುವಂತಹ ಜಮೀನನ್ನು ತನ್ನ ಹೆಸರಿನಲ್ಲಿ ಹೊಂದಿರುವಂತಹ ವ್ಯಕ್ತಿ.

ಮಕ್ಕಳು ಎಂದರೆ ಕಾನೂನಿನ ಪ್ರಕಾರ ದತ್ತು ಪಡೆದಿರುವ ಮಕ್ಕಳು/ಸೇರಿದಂತೆ ಪೋಷಕ/ಪೋಷಕರ ಜೈವಿಕ ಸಂತತಿ. ಒಂದು ಪಕ್ಷ ಯಾವುದೇ ಮಕ್ಕಳಿಗೆ ಪೋಷಕ/ಪೋಷಕರು ಇಲ್ಲದೆ ಇದ್ದ ಸಂದರ್ಭದಲ್ಲಿ ಉಳುಮೆ ಮಾಡುವಂತಹ /ಕೃಷಿ ಮಾಡುವಂತಹ ಜಮೀನನ್ನು ಅವರು ಹೊಂದಿರತಕ್ಕದ್ದು. ಈ ಷರತ್ತು ಅವರುಗಳಿಗೆ ಈ ಯೋಜನೆಯ ಲಾಭವನ್ನು ಪಡೆಯಲು ಅನುಕೂಲವಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನೋಟಿಫಿಕೇಶನ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *