SEBI : 120 ಸಹಾಯಕ ವ್ಯವಸ್ಥಾಪಕ ( ಗ್ರೇಡ್ ಎ) ಹುದ್ದೆಗಳಿಗೆ ಅರ್ಜಿ ಆಹ್ವಾನ- ಸುದ್ದಿಜಾಲ ನ್ಯೂಸ್

By | 06/01/2022

ಸೆಕ್ಯುರಿಟೀಸ್ ಮತ್ತು ಎಕ್ಸ್ ಚೇಂಜ್ ಬೋರ್ಡ್ ಆಫ್ ಇಂಡಿಯಾದಲ್ಲಿ 120 ಸಹಾಯಕ ವ್ಯವಸ್ಥಾಪಕ ( ಗ್ರೇಡ್ ಎ) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಹುದ್ದೆ : ಸಹಾಯಕ ವ್ಯವಸ್ಥಾಪಕ ( ಗ್ರೇಡ್ ಎ)

ಹುದ್ದೆ ಸಂಖ್ಯೆ : 120

ಅರ್ಜಿ ಸಲ್ಲಿಕೆ ಆರಂಭ ದಿನಾಂಕ : ಜನವರಿ 05, 2022

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 24, 2022

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜನವರಿ 24, 2022

ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಲು ಕೊನೆಯ ದಿನಾಂಕ : ಫೆಬ್ರವರಿ 20, 2022

ಫೇಸ್ | ಪ್ರವೇಶ ಪತ್ರ ದಿನಾಂಕ : ಫೆಬ್ರವರಿ 2022

ಫೇಸ್ | ಆನ್ಲೈನ್ ಪರೀಕ್ಷೆ : ಫೆಬ್ರವರಿ 20, 2022

ಫೇಸ್ || ಆನ್ಲೈನ್ ಪರೀಕ್ಷೆ – ಮಾರ್ಚ್ 20, 2022

ವಿದ್ಯಾರ್ಹತೆ : ಈ ಹುದ್ದೆಗೆ ಸ್ನಾತಕೋತ್ತರ ಪದವಿ, ಪದವಿ ಮತ್ತು ಕಾನೂನು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಹೊಂದಿರಬೇಕು.

ವಯೋಮಿತಿ : ಡಿ.31, 2021 ರ ಅನ್ವಯ ಗರಿಷ್ಠ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಪ.ಜಾತಿ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ‌ 28,150/- ರಿಂದ 1,15,000/- ರೂ.ಗಳವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ : ಅಭ್ಯರ್ಥಿಗಳು 1000/- ರೂ. ಮತ್ತು ಪ.ಜಾತಿ/ಪ.ಪಂಗಡ/ ಅಂಗವಿಕಲ ಅಭ್ಯರ್ಥಿಗಳು ರೂ.100 /- ರೂ. ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬಹುದು.

ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವುದರೊಂದಿಗೆ ಜನವರಿ 5,2022 ರಿಂದ ಜನವರಿ 24, 2022 ರೊಳಗೆ ಅರ್ಜಿಯನ್ನು ಹಾಕಬಹುದು.

ನೋಟಿಫಿಕೇಶನ್ ಈ ಕೆಳಗೆ ನೀಡಲಾಗಿದೆ

Leave a Reply

Your email address will not be published. Required fields are marked *