ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರರು, ಬೆರಳಚ್ಚುಗಾರರ ಹುದ್ದೆಗೆ ಅರ್ಜಿ ಆಹ್ವಾನ- ಸುದ್ದಿಜಾಲ ನ್ಯೂಸ್

By | 24/12/2021

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಯ ವಿವರ : ಶೀಘ್ರಲಿಪಿಗಾರರು, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು

ಹುದ್ದೆಗಳ ಸಂಖ್ಯೆ : 17 ಹುದ್ದೆ

ಶೀಘ್ರಲಿಪಿಗಾರರು – 4 ಹುದ್ದೆ, ಬೆರಳಚ್ಚುಗಾರರು – 9 ಹುದ್ದೆ, ಬೆರಳಚ್ಚು ನಕಲುಗಾರರು – 4 ಹುದ್ದೆ

ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ, ಸಾಮಾನ್ಯ ವರ್ಗ ಗರಿಷ್ಠ 35 ವರ್ಷ, 2 ಎ, 2 ಬಿ, 3 ಎ, 3 ಬಿ ಗರಿಷ್ಠ 38 ವರ್ಷ , ಪ.ಜಾತಿ/ಪ.ಪಂ/ ಪ್ರವರ್ಗ 1 ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.

ವೇತನ : ಶೀಘ್ರಲಿಪಿಗಾರರು ಹುದ್ದೆಗೆ ಮಾಸಿಕ ರೂ.27,650/-ರಿಂದ ರೂ.52,650/-

ಬೆರಳಚ್ಚುಗಾರರು : ರೂ.21,400/- ರಿಂದ ರೂ.42,000/-

ಬೆರಳಚ್ಚು ನಕಲುಗಾರರು : ರೂ.21,400/- ರಿಂದ ರೂ.42,000/-

ಆಯ್ಕೆ ವಿಧಾನ : ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ : ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ‌200/-, ಪ್ರವರ್ಗ 2 ಎ, 2 ಬಿ, 3 ಎ, 3 ಬಿ ಅಭ್ಯರ್ಥಿಗಳು ರೂ.100/-, ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ : ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜಿಲ್ಲ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು.

ವಿದ್ಯಾರ್ಹತೆ : ಶೀಘ್ರಲಿಪಿಗಾರರು – ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರ್ಯಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ‌ ವಿದ್ಯಾರ್ಹತೆ ಹೊಂದಿರಬೇಕು.
ಜೊತೆಗೆ,

ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಶೀಘ್ರಲಿಪಿ ಮತ್ತು ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರ್ಯಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.

ಬೆರಳಚ್ಚುಗಾರರು : ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರ್ಯಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ‌ ವಿದ್ಯಾರ್ಹತೆ ಹೊಂದಿರಬೇಕು.
ಜೊತೆಗೆ,
ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ಡಿಪ್ಲೋಮಾ ಕಮರ್ಷಿಯಲ್ ಪ್ರ್ಯಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.

ಬೆರಳಚ್ಚು ನಕಲುಗಾರ: ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ‌ ವಿದ್ಯಾರ್ಹತೆ ಹೊಂದಿರಬೇಕು.
ಜೊತೆಗೆ,

ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಮತ್ತು ಬೆರಳಚ್ಚು ಕಿರಿಯ ದರ್ಜೆ ಪರೀಕ್ಷೆ ಉತ್ತೀರ್ಣತೆ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 27-12-2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-01-2022

ಅರ್ಜಿ ಶುಲ್ಕ ಸಲ್ಲಿಸಲು ಕೊನೆಯ ದಿನಾಂಕ : 31-01-2022

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *