8500 ಸ್ಮಾರ್ಟ್ ಕ್ಲಾಸ್ ರೂಂ ಸರಕಾರಿ ಡಿಗ್ರಿ ಕಾಲೇಜುಗಳಲ್ಲಿ : ಡಿಸಿಎಂ

By | 11/07/2021

ಉನ್ನತ ಶಿಕ್ಷಣದಲ್ಲಿ ಡಿಜಿಟಲ್‌ ಕಲಿಕೆಯನ್ನು ಆದ್ಯತೆ ಒದಗಿಸಲು ಸರಕಾರಿ ಪದವಿ ಕಾಲೇಜುಗಳಲ್ಲಿ 8500 ಸ್ಮಾರ್ಟ್ ಕ್ಲಾಸ್ ರೂಂ ಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ.

2500 ಕ್ಲಾಸ್ ರೂಂಗಳ ಅಭಿವೃದ್ಧಿ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಶನಿವಾರ ತಿಳಿಸಿದ್ದಾರೆ.

ಕೋವಿಡ್ ಸಮಸ್ಯೆಯ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲು ಉನ್ನತ ಶಿಕ್ಷಣದಲ್ಲಿ ಡಿಜಿಟಲ್ ಕಲಿಕೆಗೆ ಹೆಚ್ಚು ಒತ್ತು ನೀಡಲಾಗುವುದು.

ಕಳೆದ ಶೈಕ್ಷಣಿಕ ವರ್ಷದಲ್ಲಿ 1.10 ಲಕ್ಷ ಲ್ಯಾಪ್ ಟಾಪ್ ಗಳನ್ನು ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿತ್ತು. ಇದಕ್ಕಾಗಿ ಸುಮಾರು 330 ಕೋಟಿ ವೆಚ್ಚ ಮಾಡಲಾಗಿತ್ತು. 1.60 ಲಕ್ಷದಷ್ಟಯ ಎಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ವಿತರಿಸಿದೆ
ಎಂದು ಮಲ್ಲೇಶ್ವರದ ಸರಕಾರಿ ಪದವು ಕಾಲೇಜು ವಿದ್ಯಾರ್ಥಿಗಳಿಗೆ ಶನಿವಾರ ಉಚಿತ ಟ್ಯಾಬ್ಲೆಟ್ ಪಿಸಿಗಳನ್ನು ವಿತರಿಸಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿ ಉಪಮುಖ್ಯಮಂತ್ರಿಗಳು ಹೇಳಿದರು.

Leave a Reply

Your email address will not be published. Required fields are marked *