ಈ ಬಾರಿ SSLC ಪರೀಕ್ಷೆ ಸರಳೀಕರಣ : ಮಾಹಿತಿ ಇಲ್ಲಿದೆ

ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಈ ಬಾರಿ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸರಳೀಕರಿಸಿ ಎರಡು ದಿನದಲ್ಲಿ ನಡೆಸಲು ತೀರ್ಮಾನ ಮಾಡಿದ್ದ ಶಿಕ್ಷಣ ಇಲಾಖೆ ಈಗ ಈ ಬಗ್ಗೆ ಅಧಿಕೃತವಾಗಿ ಆದೇಶ ಮಾಡಿದೆ.

ಭಾಷಾ ವಿಭಾಗದ ಮೂರು ವಿಷಯಗಳಿಗೆ ಒಂದು ಪ್ರಶ್ನೆ ಪತ್ರಿಕೆ ಮತ್ತು ಕೋರ್ ವಿಷಯಗಳಿಗೆ ಮತ್ತೊಂದು ಪ್ರಶ್ನೆ ಪತ್ರಿಕೆ ಸೇರಿ ಎರಡು ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಎರಡು ದಿನದಲ್ಲಿ ಪರೀಕ್ಷೆ ಪೂರ್ಣಗೊಳಿಸಲು ಇಲಾಖೆಯು ನಿರ್ಧರಿಸಿದೆ. ಹಾಗಾಗಿ ಆರು ವಿಷಯಗಳಿಗೆ ಪ್ರತ್ಯೇಕವಾಗಿ 6 ದಿನ ಪರೀಕ್ಷೆ ಇರುವುದಿಲ್ಲ. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಪ್ರಶ್ನೆ ಕೇಳಲಾಗುತ್ತದೆ. ಪ್ರತಿ ಪ್ರಶ್ನೆ ಪತ್ರಿಕೆಯಲ್ಲಿ ಮೂರು ವಿಷಯದ 120 ಅಂಕಗಳಿಗೆ ಪ್ರಶ್ನೆಗಳು ಇರುತ್ತವೆ. ಪ್ರತಿ ವಿಷಯದಲ್ಲಿ ವಿದ್ಯಾರ್ಥಿ ಪಡೆದ ಅಂಕಗಳನ್ನು ಗರಿಷ್ಠ 100 ಅಂಕಗಳಿಗೆ ಪರಿವರ್ತಿಸಿ ಫಲಿತಾಂಶ ನೀಡಲಾಗುತ್ತದೆ. ಅಂಕ ಹಾ ಗ್ರೇಡ್ ಎರಡೂ ಆಧಾರದಲ್ಲಿ ಫಲಿತಾಂಶ ನೀಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.

error: Content is protected !!