ರಾಜ್ಯ ಸರಕಾರ ನಡೆಸಲಿರುವ ಜುಲೈ 3 ನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿ ಗಳಿಗೆ ಅರಿವು ಮೂಡಿಸುವ ಬಗ್ಗೆ ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಒಎಂಆರ್ ಶೀಟ್ ಹಾಗೂ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆ ಮಾಡಿದೆ. ಪ್ರತಿಯೊಂದು ಪುಟದಲ್ಲೂ ಆಯಾ ವಿಷಯಕ್ಕೆ ಸಂಬಂಧಿಸಿದ ಪ್ರತ್ಯೇಕ ಮಾಹಿತಿ ಇದೆ. ಮೂರೂ ಪುಟದಲ್ಲೂ ವಿದ್ಯಾರ್ಥಿಯ ಫೊಟೋ ಮತ್ತು ಸಹಿ ಹಾಕಬೇಕು. ಮೂರು ಪುಟದಲ್ಲೂ ಬಣ್ಣಗಳನ್ನು ಪ್ರತ್ಯೇಕವಾಗಿ ನೀಡಲಾಗಿದೆ.ಮೂರು ವಿಷಯದ ಪ್ರಶ್ನೆಗಳು ಒಂದೇ ಪ್ರಶ್ನೆ ಪತ್ರಿಕೆಯಲ್ಲಿ ನೀಡಲಾಗಿದೆ. ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆ ಮಾಡಿದೆ.
40 ಪ್ರಶ್ನೆಗಳು ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲಿದೆ. 40 ಪ್ರಶ್ನೆಗಳಿಗೂ ವಿದ್ಯಾರ್ಥಿಗಳು ಉತ್ತರಿಸಬೇಕಾಗಿದೆ.
ಮಾದರಿ ಪ್ರಶ್ನೆ ಹಾಗೂ ಒಎಂಆರ್ ಶೀಟ್ ಗಳನ್ನು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ವೆಬ್‌ಸೈಟ್ ನಲ್ಲಿ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ













Got a Questions?
Find us on Socials or Contact Us and we’ll get back to you as soon as possible.