ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ

ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಐಟಿಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್ ಡಿಸೇಲ್, ಮೆಕ್ಯಾನಿಕ್ ಆಟೋ ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವೆಲ್ಡರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಮೆಕ್ಯಾನಿಕ್ ವೆಹಿಕಲ್ ಬಾಡಿ ಬಿಲ್ಡರ್, ಪ್ರೋಗ್ರಾಮಿಂಗ್ ಮತ್ತು ಸಿಸ್ಟಮ್ ಅಡ್ಮಿನಿಸ್ಟ್ರೇಶನ್ ಅಸಿಸ್ಟೆಂಟ್ ವೃತ್ತಿಗಳಲ್ಲಿ ತೇರ್ಗಡೆಯಾದ ಬಗ್ಗೆ ಮೂಲ ದಾಖಲಾತಿಗಳೊಂದಿಗೆ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 15 ಕೊನೆಯ ದಿನಾಂಕವಾಗಿದೆ. ನಗರದ ಬಿಜೈನ ಮಂಗಳೂರು ವಿಭಾಗದ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿಗೆ ಅರ್ಜಿ ಸಲ್ಲಿಸುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!