Tag Archives: education

SSLC Exam 2021: ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೂ ಪರೀಕ್ಷೆಗೆ ಅವಕಾಶ

By | 15/07/2021

ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಜುಲೈ 19 ಮತ್ತು ಜುಲೈ 22 ರಂದು ನಿಗದಿಯಾಗಿದೆ. ಪೂರ್ಣ ಶುಲ್ಕ ಕಟ್ಟದ ವಿದ್ಯಾರ್ಥಿಗಳೂ ಪರೀಕ್ಷೆ ಬರೆಯಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ. ಪ್ರವೇಶ ಪತ್ರವನ್ನು ಅವರಿಗೆ ನಿರಾಕರಿಸುವಂತಿಲ್ಲ ಎಂದು ಹೇಳಿದ್ದಾರೆ. ಪರೀಕ್ಷೆಗೆ ಎಲ್ಲಾ ಸಿದ್ಧತೆಗಳು ನಡೆದಿದೆ. ಇದರ ಮಧ್ಯೆ ಪರೀಕ್ಷಾ ಶುಲ್ಕ ಪಾವತಿ ಮಾಡದಿದ್ದರೆ ಹಾಲ್ ಟಿಕೆಟ್ ನೀಡಲಾಗುವುದಿಲ್ಲ ಎಂಬ ಮಾತಿಗೆ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದೆಂದು ಕ್ರಮ ವಹಿಸಬೇಕೆಂದು ಕರ್ನಾಟಕ ಮಾಧ್ಯಮಿಕ ಶಿಕ್ಷಣ… Read More »

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 11 ಹೊಸ ಕೋರ್ಸ್

By | 14/07/2021

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ಹೊಸ 11 ಕೋರ್ಸ್ ಗಳನ್ನು ಪ್ರಾರಂಭಿಸಲು ಯುಜಿಸಿ ಅನುಮೋದನೆಯನ್ನು ನೀಡಿದೆ. ವಿವರಗಳು ಈ ಕೆಳಗೆ ನೀಡಲಾಗಿದೆ : ಎಂ.ಎಸ್ಸಿ( ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಫುಡ್ ಆ್ಯಂಡ್ ನ್ಯೂಟ್ರಿಷಿಯನ್, ಇನ್ಫಾರ್ಮೇಶನ್ ಟೆಕ್ನಾಲಜಿ )ಬಿಎಸ್ಸಿ ( ಜನರಲ್, ಇನ್ಫಾರ್ಮೇಶನ್ ಟೆಕ್ನಾಲಜಿ, ಹೋಂ ಸೈನ್ಸ್)ಬಿಬಿಎ,ಬಿಸಿಎ,ಎಂಎ ( ಶಿಕ್ಷಣ)ಎಂಎ ( ತೆಲುಗು) ದೂರಶಿಕ್ಷಣ ಕೋರ್ಸ್ ಗಳ ಆರಂಭಕ್ಕೆ ಯುಜಿಸಿ ತಜ್ಞರ ಸಮಿತಿ ಅನುಮೋದನೆ ನೀಡಿದೆ. ಈ ಸಂಬಂಧ ಯುಜಿಸಿಯಿಂದ ಅಧಿಕೃತ ಪತ್ರವೊಂದು ಬರುವುದು ಬಾಕಿ ಇದೆ. ಜುಲೈನಲ್ಲಿ ಕೋರ್ಸ್… Read More »

8500 ಸ್ಮಾರ್ಟ್ ಕ್ಲಾಸ್ ರೂಂ ಸರಕಾರಿ ಡಿಗ್ರಿ ಕಾಲೇಜುಗಳಲ್ಲಿ : ಡಿಸಿಎಂ

By | 11/07/2021

ಉನ್ನತ ಶಿಕ್ಷಣದಲ್ಲಿ ಡಿಜಿಟಲ್‌ ಕಲಿಕೆಯನ್ನು ಆದ್ಯತೆ ಒದಗಿಸಲು ಸರಕಾರಿ ಪದವಿ ಕಾಲೇಜುಗಳಲ್ಲಿ 8500 ಸ್ಮಾರ್ಟ್ ಕ್ಲಾಸ್ ರೂಂ ಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ. 2500 ಕ್ಲಾಸ್ ರೂಂಗಳ ಅಭಿವೃದ್ಧಿ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಶನಿವಾರ ತಿಳಿಸಿದ್ದಾರೆ. ಕೋವಿಡ್ ಸಮಸ್ಯೆಯ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲು ಉನ್ನತ ಶಿಕ್ಷಣದಲ್ಲಿ ಡಿಜಿಟಲ್ ಕಲಿಕೆಗೆ ಹೆಚ್ಚು ಒತ್ತು ನೀಡಲಾಗುವುದು. ಕಳೆದ ಶೈಕ್ಷಣಿಕ ವರ್ಷದಲ್ಲಿ 1.10 ಲಕ್ಷ ಲ್ಯಾಪ್ ಟಾಪ್ ಗಳನ್ನು ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ… Read More »

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ : ಪಿಹೆಚ್‌ಡಿ ಪ್ರವೇಶಾತಿ ಪರಿಷ್ಕೃತ ಅಧಿಸೂಚನೆ

By | 23/06/2021

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಇಲ್ಲಿ ಶೈಕ್ಷಣಿಕ ವರ್ಷ 2020-21 ನೇ ಸಾಲಿಗೆ ನಡೆಯಬೇಕಾಗಿದ್ದ ಪಿಹೆಚ್‌ಡಿ ಪ್ರವೇಶ ಪರೀಕ್ಷೆಗಳನ್ನು ಕೋವಿಡ್ -19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿರುವ ಕಾರಣದಿಂದ, ಸ್ನಾತಕೋತ್ತರ ಕೇಂದ್ರಗಳಾದ ವಿಜಯಪುರ, ಬಾಗಲಕೋಟ, ಜಮಖಂಡಿ ಮತ್ತು ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ವಿವಿಧ ವಿಭಾಗದಲ್ಲಿ ಪಿಹೆಚ್‌ಡಿ ಅಧ್ಯಯನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈಗಾಗಲೇ 2020-21 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ… Read More »

ಒಂದರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಡಿಡಿ ಚಂದನಾದಲ್ಲಿ ವೀಡಿಯೋ ಪಾಠ

By | 22/06/2021

ಹೊಸದಾಗಿ ಶಿಕ್ಷಣ ನೀತಿ ಜಾರಿಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಕ ತರಬೇತಿ ಸಂಸ್ಥೆಗಳು ಬಲಿಷ್ಠವಾಗಬೇಕು ಎಂಬ ನಿಟ್ಟಿನಲ್ಲಿ ತರಬೇತಿ ಹಾಗೂ ಸಂಶೋಧನಾ ಸಂಸ್ಥೆಗಳು ಶಿಕ್ಷಣ ಗುಣಮಟ್ಟ ಸುಧಾರಣೆಗೆ ಹೆಚ್ಚು ಗಮನಹರಿಸಲು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಡಿಎಸ್ ಇಆರ್ ಟಿ ಸಂಸ್ಥೆಯು ಶಿಕ್ಷಣ ಸಂಶೋಧನೆಯಲ್ಲಿ ಪ್ರಧಾನವಾದ ಜವಾಬ್ದಾರಿ ಹೊಂದಿದ್ದು, ಈ ಸ್ವಾಯತ್ತ ಸಂಸ್ಥೆ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲು ಸಂಶೋಧನಾ ವಿದ್ವಾಂಸರ ಸೇವೆಯನ್ನು ಪಡೆಯಲು ಆಲೋಚಿಸಲಾಗಿದೆ ಎಂದು ಸಚಿವರು ಹೇಳಿದರು. ಜುಲೈ 1 ರಿಂದ ದೂರದರ್ಶನದ ಚಂದನಾ ವಾಹಿನಿಯ ಮೂಲಕ… Read More »

12 ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿ ಗ್ರೇಡ್ ಹೇಗೆ? : ಸುಪ್ರೀಂ ಕೋರ್ಟ್ ಗೆ ಸಿಬಿಎಸ್ ಇ ವರದಿ ಸಲ್ಲಿಕೆ

By | 17/06/2021

ದ್ವಿತೀಯ ಪಿಯುಸಿ ( 12 ನೇ ತರಗತಿ) ವಿದ್ಯಾರ್ಥಿಗಳಿಗೆ ಈ ಬಾರಿ ಗ್ರೇಡ್ ಹೇಗೆ ನೀಡಲಾಗುತ್ತದೆ, ಮೌಲ್ಯಮಾಪನ ಮಾನದಂಡ ಬಗ್ಗೆ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಸಮಿತಿ ಅಂತಿಮ ವರದಿಯನ್ನು ಸುಪ್ರೀಯ ಕೋರ್ಟ್ ಮುಂದೆ ಮಂಡಿಸಿದೆ. 11 ನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಶೇಕಡಾ 30 ರಷ್ಟು ಅಂಕ, ಶೇಕಡಾ 30 ರಷ್ಟು ಅಂಕಗಳನ್ನು 10 ನೇ ತರಗತಿಯ ಮೂರು ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳು ಯಾವ ಪರೀಕ್ಷೆಯಲ್ಲಿ ಬಂದಿರುತ್ತದೋ ಅದರಿಂದ ಸೇರಿಸಿ ಹಾಗೂ ಉಳಿದ ಶೇಕಡಾ 40 ನ್ನು 12… Read More »