Tag Archives: KPSC FDA Exam

KPSC Exam : ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ

By | 16/09/2021

ಸೆಪ್ಟೆಂಬರ್ 18 ಮತ್ತು 19 ರಂದು ನಡೆಯಲಿರುವ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ( KPSC ) ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮೊಬೈಲ್ ತರಲು ಅವಕಾಶವಿಲ್ಲ ಎಂದು ಹೇಳಿದೆ. ಸೆ.18 ಮತ್ತು 19 ರಂದು ಕರ್ನಾಟಕ ಲೋಕ ಸೇವಾ ಆಯೋಗದ ವತಿಯಿಂದ ನಡೆಯಲಿರುವ ಸಹಾಯಕರು ಮತ್ತು ದ್ವಿ ದರ್ಜೆ ಸಹಾಯಕ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮತ್ತು ಕೊಠಡಿ ಮೇಲ್ವಿಚಾರಕರು ಪರೀಕ್ಷಾ ಕೇಂದ್ರಕ್ಕೆ… Read More »

ಎಫ್ ಡಿಎ ಅರ್ಹತಾ ಪಟ್ಟಿ ಅನುಮಾನಕ್ಕೆ ಕೆಪಿಎಸ್ ಸಿ ಸ್ಪಷ್ಟನೆ

By | 14/09/2021

ಕರ್ನಾಟಕ ಲೋಕಸೇವಾ ಆಯೋಗವು 2019-20 ನೇ ಸಾಲಿನ ಸಹಾಯಕರು/ ಪ್ರಥಮ ದರ್ಜೆ ಸಹಾಯಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 09-09-2021 ರಂದು ಅರ್ಹತಾ ಪಟ್ಟಿಯನ್ನು ಪ್ರಕಟಿಸಿತ್ತು. ಈ ಅರ್ಹತಾ ಪಟ್ಟಿಯಲ್ಲಿ ಒಂದೇ ಸಮುದಾಯದ (ಜಾತಿಯ) 70 ಅಭ್ಯರ್ಥಿಗಳ ಹೆಸರು ಇತ್ತು. ಈ ಕಾರಣ ಹಲವು ಅನುಮಾನಗಳು ಕೆಪಿಎಸ್ ಸಿ ಬಗ್ಗೆ ವ್ಯಕ್ತವಾಗಿದ್ದವು. ಇವರೆಲ್ಲ ಒಂದೇ ಕೇಂದ್ರದಲ್ಲಿ ಪರೀಕ್ಷೆಗಳನ್ನು ಬರೆದು ಪಾಸಾಗಿರುತ್ತಾರೆ. ಹಾಗೂ ನಕಲು ಮಾಡಿರುವ ಶಂಕೆ ಇದೆ ಎಂದು ಮಾಧ್ಯಮಗಳಲ್ಲಿ ಕನ್ನಡ ಸುದ್ದಿ ಪತ್ರಿಕೆಗಳಲ್ಲಿ ಅನುಮಾನ ವ್ಯಕ್ತಪಡಿಸಿ ವರದಿ ಮಾಡಲಾಗಿತ್ತು. ಇದಕ್ಕೆ… Read More »

ಫೆ.28 ರ ಎಫ್ ಡಿ ಎ ಪರೀಕ್ಷೆ ಗೆ ಗುರುತಿನ ಚೀಟಿ ಕಡ್ಡಾಯ : ಇಲ್ಲಿದೆ ಹೆಚ್ಚಿನ ವಿವರ

By | 25/02/2021

ಫೆಬ್ರವರಿ 28 ರಂದು ನಡೆಯುವ ಎಫ್ ಡಿ ಎ ಪರೀಕ್ಷೆಗೆ ಪ್ರವೇಶ ಪತ್ರದ ಜೊತೆಗೆ ಗುರುತಿನ ಚೀಟಿ ಕಡ್ಡಾಯವಾಗಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ‌ ಭಾವಚಿತ್ರವಿರುವ ಚುನಾವಣಾ ಗುರುತಿನ ಚೀಟಿ, ಆಧಾರ ಕಾರ್ಡ್‌, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ, ಪಾಸ್‌ಪೋರ್ಟ್‌, ಸರ್ಕಾರಿ ನೌಕರರ ಐಡಿ ಇವುಗಳಲ್ಲಿ ಯಾವುದಾದರು ಒಂದನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಬಾಗಲಕೋಟೆ ಜಿಲ್ಲೆಯಲ್ಲಿ46 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 18,487 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬಾಗಲಕೋಟೆಯಲ್ಲಿ 33 ಪರೀಕ್ಷಾ ಕೇಂದ್ರಗಳಲ್ಲಿ 12,968 ವಿದ್ಯಾರ್ಥಿಗಳು , ಜಮಖಂಡಿ ಯ 12… Read More »

ಕೆಪಿಎಸ್ಸಿ FDA ಎಗ್ಸಾಮ್: ಪ್ರವೇಶ ಪತ್ರ ಲಭ್ಯ, ಈಗಲೇ ಡೌನ್ಲೋಡ್ ಮಾಡಿಕೊಳ್ಳಿ

By | 22/02/2021

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ ಫೆಬ್ರವರಿ 28 ರಂದು ನಡೆಸಲಿರುವ ವಿವಿಧ ಇಲಾಖೆಗಳಲ್ಲಿನ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕನ್ನು ಬಳಸಿಕೊಂಡು ಯೂಸರ್ ನೇಮ್, ಪಾಸ್ ವರ್ಡ್ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ಪಡೆದು ನಿಗದಿ ಪಡಿಸಿದ ದಿನಾಂಕದಂದು ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗಲು ಪ್ರಕಟಣೆಯಲ್ಲಿ ತಿಳಿಸಿದೆ. ಪ್ರವೇಶ ಕಾರ್ಡ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ಕರ್ನಾಟಕ ಲೋಕಸೇವಾ ಆಯೋಗವು 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

By | 05/02/2021

ಕರ್ನಾಟಕ ಲೋಕಸೇವಾ ಆಯೋಗವು 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದೆ. ಗೆಜೆಟೆಡ್ ಪ್ರೊಬೆಷನರಿಗೆ ನಡೆಸಲಾಗುವ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಅರ್ಹತಾ ಪತ್ರಿಕೆಗಳಾದ ಕನ್ನಡ, ಇಂಗ್ಲೀಷ್ ಕ್ರಮವಾಗಿ ದಿನಾಂಕ 13-02-2021 ರಂದು ಬೆಳಗ್ಗೆ ಸಮಯ 10 ರಿಂದ 12 ಗಂಟೆಯವರೆಗೆ ಹಾಗೇ ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ನಡೆಯಲಿದೆ. ಫೆಬ್ರವರಿ 14 ರಂದು ಬೆಳಿಗ್ಗೆ 9 ರಿಂದ 12 ಗಂಟೆವರೆಗೆ ಪತ್ರಿಕೆ-1 (ಪ್ರಬಂಧ) ನಡೆಯಲಿದೆ.ಉಳಿದ ಮಾಹಿತಿಗಾಗಿ ಈ ಕೆಳಗಿನ ಪಟ್ಟಿಯಲ್ಲಿ ಮಾಹಿತಿಯನ್ನು ಪಡೆಯಬಹುದು.

ಕೆಪಿಎಸ್ಸಿ ಎಫ್‌ಡಿಎ ಲಿಖಿತ ಪರೀಕ್ಷಾ ದಿನಾಂಕ ಪ್ರಕಟ: ಇಲ್ಲಿದೆ ಹೆಚ್ಚಿನ ವಿವರ

By | 02/02/2021

ಕರ್ನಾಟಕ ಲೋಕ ಸೇವಾ ಆಯೋಗವು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕರು/ ಪ್ರಥಮ ದರ್ಜೆ ಸಹಾಯಕರ (ಎಫ್‌ಡಿಎ) ಹುದ್ದೆಗಳ ನೇಮಕಕ್ಕೆ ನಡೆಸುವ ಲಿಖಿತ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಪ್ರಕಟಿಸಿದೆ. ದಿನಾಂಕ 31 ಜನವರಿ 2020 ರಂದು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು ಅಧಿ ಸೂಚನೆ ಹೊರಡಿಸಿತ್ತು. ಲಿಖಿತ ಪರೀಕ್ಷೆ ಯು ಜನವರಿ 24, 2021 ರಂದು ನಿಗದಿಪಡಿಸಿ ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಆಯೋಗವು ಈ ಸ್ಪರ್ಧಾತ್ಮಕ ಪರೀಕ್ಷೆ ಯನ್ನು… Read More »