Tag Archives: kpsc

ಫೆ.28 ರ ಎಫ್ ಡಿ ಎ ಪರೀಕ್ಷೆ ಗೆ ಗುರುತಿನ ಚೀಟಿ ಕಡ್ಡಾಯ : ಇಲ್ಲಿದೆ ಹೆಚ್ಚಿನ ವಿವರ

By | 25/02/2021

ಫೆಬ್ರವರಿ 28 ರಂದು ನಡೆಯುವ ಎಫ್ ಡಿ ಎ ಪರೀಕ್ಷೆಗೆ ಪ್ರವೇಶ ಪತ್ರದ ಜೊತೆಗೆ ಗುರುತಿನ ಚೀಟಿ ಕಡ್ಡಾಯವಾಗಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಗೆ‌ ಭಾವಚಿತ್ರವಿರುವ ಚುನಾವಣಾ ಗುರುತಿನ ಚೀಟಿ, ಆಧಾರ ಕಾರ್ಡ್‌, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ, ಪಾಸ್‌ಪೋರ್ಟ್‌, ಸರ್ಕಾರಿ ನೌಕರರ ಐಡಿ ಇವುಗಳಲ್ಲಿ ಯಾವುದಾದರು ಒಂದನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಬಾಗಲಕೋಟೆ ಜಿಲ್ಲೆಯಲ್ಲಿ46 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 18,487 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಬಾಗಲಕೋಟೆಯಲ್ಲಿ 33 ಪರೀಕ್ಷಾ ಕೇಂದ್ರಗಳಲ್ಲಿ 12,968 ವಿದ್ಯಾರ್ಥಿಗಳು , ಜಮಖಂಡಿ ಯ 12… Read More »

ಕೆಪಿಎಸ್ ಸಿ ಪ್ರವೇಶ ಪತ್ರ ರದ್ದು – ಪ್ರಕಟಣೆ

By | 23/02/2021

ಕರ್ನಾಟಕ ಲೋಕಸೇವಾ ಆಯೋಗವು 2019 ನೇ ಸಾಲಿನ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಮತ್ತು ಕರ್ನಾಟಕ ಭವನ ದೆಹಲಿಯ ಉಳಿಕೆ‌ ಮೂಲ ವೃಂದದ ಮತ್ತು ಹೈದ್ರಬಾದ್ ಕರ್ನಾಟಕ ವೃಂದದ ‌ಸಹಾಯಕ/ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ದಿನಾಂಕ : 24.01.2021 (ಭಾನುವಾರ ) ರ ಸ್ಪರ್ಧಾತ್ಮಕ ಪರೀಕ್ಷೆ ಗಾಗಿ ಜಾರಿಗೊಳಿಸಲಾಗಿದ್ದ ಪ್ರವೇಶ ಪತ್ರವನ್ನು ರದ್ದುಪಡಿಸಿದೆ ಎಂದು ತಿಳಿಸಿದೆ. ಪ್ರಸ್ತುತ, ಸದರಿ ಪರೀಕ್ಷೆಯ ಅಭ್ಯರ್ಥಿಗಳಿಗೆ ಮರು ನಿಗದಿಯಾದ ದಿನಾಂಕ : 28.02.2021 ರ ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರವೇಶ ಪತ್ರಗಳನ್ನು ಬಿಡುಗಡೆಗೊಳಿಸಿದ್ದು, ಅಭ್ಯರ್ಥಿಗಳು ಆಯೋಗದ… Read More »

ಕೆಪಿಎಸ್ಸಿ FDA ಎಗ್ಸಾಮ್: ಪ್ರವೇಶ ಪತ್ರ ಲಭ್ಯ, ಈಗಲೇ ಡೌನ್ಲೋಡ್ ಮಾಡಿಕೊಳ್ಳಿ

By | 22/02/2021

ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ ಫೆಬ್ರವರಿ 28 ರಂದು ನಡೆಸಲಿರುವ ವಿವಿಧ ಇಲಾಖೆಗಳಲ್ಲಿನ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ. ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕನ್ನು ಬಳಸಿಕೊಂಡು ಯೂಸರ್ ನೇಮ್, ಪಾಸ್ ವರ್ಡ್ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ಪಡೆದು ನಿಗದಿ ಪಡಿಸಿದ ದಿನಾಂಕದಂದು ಕಡ್ಡಾಯವಾಗಿ ಪರೀಕ್ಷೆಗೆ ಹಾಜರಾಗಲು ಪ್ರಕಟಣೆಯಲ್ಲಿ ತಿಳಿಸಿದೆ. ಪ್ರವೇಶ ಕಾರ್ಡ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ಕೆ ಎ ಎಸ್ (KAS) ಮುಖ್ಯ ಪರೀಕ್ಷೆಯ ಅಭ್ಯರ್ಥಿಗಳ ಪ್ರವೇಶ ಪತ್ರ ಪ್ರಕಟ

By | 10/02/2021

ಕರ್ನಾಟಕ ಲೋಕಸೇವಾ ಆಯೋಗವು ತನ್ನ ಅಧಿಕೃತ ವೆಬ್‌ಸೈಟ್‌ ನಲ್ಲಿ 2017-18 ರ ಸಾಲಿನ ಗ್ರೂಪ್ ಎ ಮತ್ತು ಗ್ರೂಪ್ ಬಿ ವೃಂದದ ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳ ಮುಖ್ಯ ಪರೀಕ್ಷೆಗಳ ವೇಳಾ ಪಟ್ಟಿಯನ್ನು ಪ್ರಕಟಿಸಿದೆ.ಅಭ್ಯರ್ಥಿಗಳು ತಮ್ಮ username password ಬಳಸಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

ಕೆಪಿಎಸ್ಸಿ ಎಫ್‌ಡಿಎ ಲಿಖಿತ ಪರೀಕ್ಷಾ ದಿನಾಂಕ ಪ್ರಕಟ: ಇಲ್ಲಿದೆ ಹೆಚ್ಚಿನ ವಿವರ

By | 02/02/2021

ಕರ್ನಾಟಕ ಲೋಕ ಸೇವಾ ಆಯೋಗವು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕರು/ ಪ್ರಥಮ ದರ್ಜೆ ಸಹಾಯಕರ (ಎಫ್‌ಡಿಎ) ಹುದ್ದೆಗಳ ನೇಮಕಕ್ಕೆ ನಡೆಸುವ ಲಿಖಿತ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಪ್ರಕಟಿಸಿದೆ. ದಿನಾಂಕ 31 ಜನವರಿ 2020 ರಂದು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು ಅಧಿ ಸೂಚನೆ ಹೊರಡಿಸಿತ್ತು. ಲಿಖಿತ ಪರೀಕ್ಷೆ ಯು ಜನವರಿ 24, 2021 ರಂದು ನಿಗದಿಪಡಿಸಿ ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಆಯೋಗವು ಈ ಸ್ಪರ್ಧಾತ್ಮಕ ಪರೀಕ್ಷೆ ಯನ್ನು… Read More »