Tag Archives: School

ಪ್ರಾಧ್ಯಾಪಕರ ವರ್ಗಾವಣೆಯ ತಾತ್ಕಾಲಿಕ ಪಟ್ಟಿ ಬಿಡುಗಡೆ

By | 22/07/2021

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಬೋಧಕ ವರ್ಗದ ವರ್ಗಾವಣೆಗೆ ಅರ್ಹ ಪ್ರಾಧ್ಯಾಪಕರ‌ ತಾತ್ಕಾಲಿಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸರಕಾರಿ ಇಂಜಿನಿಯರಿಂಗ್, ಪದವಿ ಕಾಲೇಜುಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆಗೆ ಒಳಪಡಲಿರುವ ಬೋಧಕರು, ಗ್ರಂಥಪಾಲಕರು, ಕ್ರೀಡಾ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು, ಸರಕಾರಿ‌ ಪಾಲಿಟೆಕ್ನಿಕ್ ಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯ ವರ್ಗಾವಣೆಗೆ ಒಳಪಡಲಿರುವ ಉಪನ್ಯಾಸಕರ ಉಳಿದ ಮೂಲ ವೃಂದದ ವಲಯವಾರು ಪಟ್ಟಿ, ವಿಶೇಷ ಪ್ರಕರಣಗಳಡಿ ವರ್ಗಾವಣೆಯ ಕಾಯ್ದಿರಿಸಿದ ಬೋಧಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದು ವರ್ಗಾವಣಾ ತಾತ್ಕಾಲಿಕ ಆದ್ಯತಾ ಪಟ್ಟಿಯಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ, ಜು.23 ರೊಳಗೆ… Read More »

ಎಸ್ ಎಟಿಎಸ್ ಪೋರ್ಟಲ್ ನಲ್ಲಿ ನಮೂದಿಸಿದ್ದ ಎಸ್ ಎಸ್ ಎಲ್ ಸಿ, ಪಿಯುಸಿ ಅಂಕ ಮಾಯ !

By | 15/06/2021

ಎಸ್ ಎಟಿಎಸ್ ( ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆ ) ಪೋರ್ಟಲ್ ನಲ್ಲಿ ನಮೂದಿಸಿದ್ದ ಎಸ್ ಎಸ್ ಎಲ್ ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳು ಮಾಯ ! ರಾಜ್ಯದಾದ್ಯಂತ ಎಲ್ಲ ಸರಕಾರಿ, ಅನುದಾನಿತ ಮತ್ತು ಖಾಸಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರುಗಳಿಗೆ ಪ್ರಥಮ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಪಡೆದ ಅಂಕಗಳನ್ನು ಈ ಪೋರ್ಟಲ್ ನಲ್ಲಿ ನಮೂದಿಸುವಂತೆ ಇದೇ 7 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಕ್ಕೆ ಈ ಕೆಲಸವನ್ನು ಬಹುತೇಕ ಪೂರ್ಣಗೊಳಿಸಿದ್ದರು.… Read More »

5 ರಿಂದ 10 ನೇ ತರಗತಿಗಳ ಆಫ್ ಲೈನ್ ಆನ್ ಲೈನ್ ತರಗತಿಗಳ ಮಾರ್ಗಸೂಚಿ ಬಿಡುಗಡೆ

By | 13/06/2021

2021-22 ನೇ ಸಾಲಿನ ಶೈಕ್ಷಣಿಕ ವರ್ಷದ ತಯಾರಿಯು ಜುಲೈ ಒಂದರಿಂದ ಆರಂಭವಾಗಲಿದ್ದು 5 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಭೌತಿಕ ತರಗತಿ ಬದಲು ಆನ್ಲೈನ್ ಮತ್ತು ಆಫ್ಲೈನ್ ನಲ್ಲಿ ಪಠ್ಯ ಬೋಧನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ದೂರದರ್ಶನ ಚಂದನ ವಾಹಿನಿಯಲ್ಲಿ ಸಂವೇದಾ ಕಾರ್ಯಕ್ರಮದ ಮೂಲಕ 1662 ವಿಡಿಯೋ ಪಾಠ ಬೋಧನಾ ನಡೆಯಲಿದೆ. ಎಫ್ ಎಂ ರೇಡಿಯೋದಲ್ಲಿ ಆಡಿಯೋ ಪಾಠಗಳ ಪ್ರಸಾರನಡೆಯಲಿದೆ. ಈಗಾಗಲೇ ಕೇಂದ್ರ ಸರಕಾರದ ದೀಕ್ಷಾ ಆ್ಯಪ್ ನಲ್ಲಿ 1 ರಿಂದ 10 ನೇ… Read More »

ಜುಲೈ 1 ರಿಂದ ಶಾಲೆ ಶುರು

By | 12/06/2021

ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 2021-22 ಸಾಲಿನ ಶೈಕ್ಷಣಿಕ ಚಟುವಟಿಕೆಗಳ ಮಾರ್ಗಸೂಚಿ ಬಿಡುಗಡೆ ಮಾಡಿರುವ ಸಾರ್ವಜನಿಕ ‌ಶಿಕ್ಷಣ ಇಲಾಖೆ, ಜುಲೈ 1 ರಿಂದ ಶಾಲೆ ಪ್ರಾರಂಭಿಸಿ ಕೋವಿಡ್ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಆನ್ಲೈನ್ ಹಾಗೂ ಆಫ್ ಲೈನ್ ವಿಧಾನಗಳ ಮೂಲಕ ತರಗತಿಯನ್ನು ನಡೆಸಲು ಕಾರ್ಯಯೋಜನೆಯನ್ನು ಮಾಡಿದೆ. ಬೋಧನಾ ತಂತ್ರಾಂಶ ಹೊಂದಿರುವ ಮತ್ತು ಹೊಂದಿರದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಧಾನವನ್ನು ಅನುಸರಿಸಿ ಶೈಕ್ಷಣಿಕ ಚಟುವಟಿಕೆ ನಿರ್ವಹಣೆಗೆ ಸೂಚಿಸಿದೆ. ಶೈಕ್ಷಣಿಕ ವೇಳಾಪಟ್ಟಿ ಯನ್ನು ಬಿಡುಗಡೆ ಮಾಡಿದ ಇಲಾಖೆ ಕೊರೊನಾ ಕಾರಣದಿಂದ ಭೌತಿಕ ತರಗತಿ ನಡೆಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಲಭ್ಯವಿರುವ… Read More »