Tag Archives: Teaching

ಶಿಕ್ಷಕ ವೃತ್ತಿ ನಿರೀಕ್ಷೆಯಲ್ಲಿರುವವರಿಗೆ ಸಿಹಿಸುದ್ದಿ : ಸರಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರಕಾರ ನಿರ್ಧಾರ

By | 11/12/2021

ರಾಜ್ಯದ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಒಟ್ಟು 15,000 ಶಿಕ್ಷಕರ ನೇಮಕಾತಿ ಮಾಡಲು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ಈ ಕುರಿತು ಅತೀ ಶೀಘ್ರದಲ್ಲೇ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟ್ವೀಟ್ ಮಾಡಿದ್ದಾರೆ. ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು ” ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ 10,000 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಹಾಗೂ ಕಲ್ಯಾಣ ವೃಂದದ ಪದವೀಧರ ಪ್ರಾಥಮಿಕ ಶಾಲಾ… Read More »

ಟಿಇಟಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯವಾದ ಮಾಹಿತಿ

By | 26/08/2021

ಶಿಕ್ಷಕರ ನೇಮಕಾತಿಗಾಗಿ ಕರ್ನಾಟಕ ಶಿಕ್ಷಕರ‌ ಅರ್ಹತಾ ಪರೀಕ್ಷೆ ಟಿಇಟಿ ಬರೆದ ಅಭ್ಯರ್ಥಿಗಳಿಗೆ‌ ಮುಖ್ಯ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.

ಶಿಕ್ಷಣ ಪ್ರಸಾರಕ ಮಂಡಳ, ರಾಯಬಾಗ : ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

By | 25/08/2021

ಶಿಕ್ಷಣ ಪ್ರಸಾರಕ ಮಂಡಳ, ರಾಯಬಾಗ ಬೆಳಗಾವಿ ಈ ಸಂಸ್ಥೆಯಿಂದ ನಡೆಯುತ್ತಿರುವ ವಿವಿಧ ಅನುದಾನಿತ ಪ್ರೌಢಶಾಲೆ/ ಸಂ.ಪ.ಪೂ‌ ಮಹಾವಿದ್ಯಾಲಯಗಳಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಯ ವಿವರ :ಸಹ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರು ಆಸಕ್ತ ಅಭ್ಯರ್ಥಿಗಳು ಈ ಜಾಹೀರಾತು ಪ್ರಕಟಗೊಂಡ 21 ದಿನಗಳ ಒಳಗಾಗಿ ತಮ್ಮ ಶೈಕ್ಷಣಿಕ ಪ್ರಮಾಣ ಪತ್ರಗಳ ಝೆರಾಕ್ಸ್ ಪ್ರತಿಗಳೊಂದಿಗೆ ಸಾಮಾನ್ಯ ಅಭ್ಯರ್ಥಿಗಳು ರೂ.500/-, ಪ್ರವರ್ಗ 2 ಎ, 2 ಬಿ, 2 ಬಿ ಅಭ್ಯರ್ಥಿಗಳು ರೂ.250/- ಹಾಗೂ… Read More »

ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ

By | 29/07/2021

ಸಾರ್ವಜನಿಕ ಶಿಕ್ಷಣ ಇಲಾಖೆ 2021-22 ನೇ ಸಾಲಿನ ‘ ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ತಾಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಮೂರು ಸಮಿತಿಗಳನ್ನು ರಚಿಸಿ, ಪ್ರಶಸ್ತಿಗೆ ಶಿಕ್ಷಕರನ್ನು ಆಯ್ಕೆ ಮಾಡಲಾಗುತ್ತದೆ. ಈ ಬಾರಿ ಆಯ್ಕೆ ಪ್ರಕ್ರಿಯೆಯು ಸಂಪೂರ್ಣವಾಗಿ ಆನ್ಲೈನ್ ಮೂಲಕವೇ ನಡೆಸಲಾಗುವುದು. ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕನಿಷ್ಠ 10 ವರ್ಷ ಶಿಕ್ಷಕರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪಡೆದ ಶಿಕ್ಷಕರು ಅರ್ಜಿ ಸಲ್ಲಿಸುವಂತಿಲ್ಲ ಎಂದು ಇಲಾಖೆ ಸ್ಪಷ್ಟ… Read More »