ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಶಾಲಾರಂಭದ ಕುರಿತು ಈಗಾಗಲೇ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಲಾಗಿದೆಯಾದರೂ, ಶಿಕ್ಷಕರ ಚಲನವಲನಕ್ಕೆ ತೊಂದರೆ ಆಗಿರುವುದರಿಂದ, ಲಾಕ್ಡೌನ್ ತೆರವಾದ ಕೂಡಲೇ ಶಿಕ್ಷಕರು ಭೌತಿಕವಾಗಿ ಶಾಲೆಗಳಿಗೆ ಹಾಜರಾಗಲು ಅವಕಾಶ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಹಲವು ಉಪನ್ಯಾಸಕ ಸಂಘಟನೆಗಳ ಕೋರಿಕೆಯ ಮೇರೆಗೆ ಮೊದಲ ಪಿಯುಸಿ ಮೌಲ್ಯಾಂಕನ ಪ್ರಕ್ರಿಯೆಯನ್ನು ಎಲ್ಲ ಜಿಲ್ಲೆಗಳ ಲಾಕ್ ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಸಮಯ ವಿಸ್ತರಿಸಿ ಆದೇಶವನ್ನು ಹೊರಡಿಸಲಾಗುತ್ತದೆ ಎಂದು ಸಹ ಸಚಿವರು ಹೇಳಿದ್ದಾರೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ನಿರ್ವಹಣೆ ಕುರಿತು ಜೂ.28 ರಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದ ನಡೆಯಲಿದ್ದು, ಸಭೆಗರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಇಲಾಖೆಯ ಆಯುಕ್ತರನ್ನು ಸುರಕ್ಷತಾ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಕ್ರಮಗಳ ಬಗ್ಗೆ ಚರ್ಚೆ ನಡೆಸಿ ಮಾರ್ಗದರ್ಶನ ನೀಡಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದರು.
ಕೋವಿಡ್ – 19 ಲಸಿಕೆಯನ್ನು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಕೊಠಡಿ ಮೇಲ್ವಿಚಾರಕರುಗಳಿಗೆ ನೀಡುವ ಪ್ರಕ್ರಿಯೆಯನ್ನು ಪರೀಕ್ಷೆಗೆ ಮೊದಲು ಪೂರ್ಣಗೊಳಿಸುವಂತೆ ಜಿಲ್ಲಾಡಳಿತದೊಂದಿಗೆ ಸಮನ್ವಯತೆ ಸಾಧಿಸಿ ಕ್ರಮ ಜರುಗಿಸಲು ಸೂಚಿಸಲಾಗಿದೆ ಎಂದು ಸಚಿವರು ಹೇಳಿದರು.
ಖಾಸಗಿ ಶಾಲಾ ಶಿಕ್ಷಕರಿಗೆ ಮುಖ್ಯಮಂತ್ರಿಗಳು ಘೋಷಿಸಿರುವ ಪ್ಯಾಕೇಜ್ ಪರಿಹಾರವನ್ನು ಫಲಾನುಭವಿಗಳಿಗೆ ನೇರವಾಗಿ ವಿತರಿಸುವ ಪ್ರಕ್ರಿಯೆಯನ್ನು ಕ್ಷಿಪ್ರಗೊಳಿಸಬೇಕೆಂದೂ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅತಿಥಿ ಶಿಕ್ಷಕರ, ಶಿಕ್ಷಕರ ಹಾಗೂ ಶಿಕ್ಷಕೇತರ ಬ್ಯಾಂಕ್ ಖಾತೆಗಳ ವಿವರಗಳನ್ನು ಸಂಗ್ರಹಿಸಿ ಅನುದಾನವನ್ನು ಶಿಕ್ಷಕರ ಖಾತೆಗಳಿಗೆ ನೇರವಾಗಿ ವರ್ಗಾಯಿಸಬೇಕು.ಅತ್ಯಂತ ಸಮರ್ಪಕವಾಗಿ ಪ್ರಕ್ರಿಯೆ ನಿರ್ವಹಣೆಯಾಗಬೇಕೆಂದು ಸಚಿವರು ಹೇಳಿದರು.













Got a Questions?
Find us on Socials or Contact Us and we’ll get back to you as soon as possible.