ದ್ವಿತೀಯ ಪಿಯುಸಿ ಪ್ರವೇಶಕ್ಕೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯು ತರಗತಿಗಳ 2021-22 ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯು ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಪ್ರಥಮ ಪಿಯು ಪ್ರವೇಶವನ್ನು ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡ ಬಳಿಕ ಪ್ರಕಟಿಸುವುದಾಗಿ ಇಲಾಖೆಯು ಹೇಳಿದೆ. ಜು.15 ರಂದು ದ್ವಿತೀಯ ಪಿಯು ಆನ್ಲೈನ್ ತರಗತಿಗಳನ್ನು ಆರಂಭಿಸಲಿರುವುದರಿಂದ, ದ್ವಿತೀಯ ‌ಪಿಯು ಪ್ರವೇಶಕ್ಕೆ ಜು.15 ರಿಂದ ಆ.15 ರವರೆಗೆ ಅವಕಾಶ ಇರಲಿದೆ‌. ಆನಂತರದಲ್ಲಿ ದಂಡ ಶುಲ್ಕ ಪಾವತಿಸಿ ಪ್ರವೇಶ ಪಡೆಯಬೇಕಾಗುತ್ತದೆ. ಪ್ರಥಮ ಹಾಗೂ ದ್ವಿತೀಯ ಪಿಯು ಪ್ರವೇಶಕ್ಕೆ 2019-20, 2020-21 ನೇ ಸಾಲಿಗೆ ನಿಗದಿಪಡಿಸಲಾದ ಶುಲ್ಕವನ್ನು ಸಂಗ್ರಹಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

error: Content is protected !!