ಕರ್ನಾಟಕ ದ್ವಿತೀಯ ಪಿಯುಸಿ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು ಎಂಬುದರ ಬಗ್ಗೆ ಹೈಕೋರ್ಟ್ ಇಂದು ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.
ಕೋವಿಡ್ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ರದ್ದು ಮಾಡಲಾಗಿರುವುದರಿಂದ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿತ್ತು.
93,000 ಅಭ್ಯರ್ಥಿಗಳು ಪರೀಕ್ಷೆ ಬರೆಯಬೇಕಾಗಿರುವುದರಿಂದ ಪುನರಾವರ್ತಿತ ವಿದ್ಯಾರ್ಥಿಗಳಿಗೆ ಮಾತ್ರ ಈ ನಿರ್ಧಾರ ಸರಿಯಲ್ಲ ಎಂಬುದರ ಬಗೆ ಹೈಕೋರ್ಟ್ ನಲ್ಲಿ ಅರ್ಜಿಯನ್ನು ಸಲ್ಲಿಸಲಾಗಿತ್ತು.
ಉತ್ತೀರ್ಣ ಮಾಡಿದರೆ ಎಲ್ಲರನ್ನೂ ಮಾಡಬೇಕು, ಈ ರೀತಿ ಮಾಡುವುದು ತಾರತಮ್ಯ ಮಾಡಿದಂತೆ ಆಗುತ್ತದೆ. ಮತ್ತು ಗುರುವಾರದೊಳಗೆ ಈ ಬಗ್ಗೆ ರಾಜ್ಯ ಸರಕಾರ ಸ್ಪಷ್ಟನೆ ನೀಡಬೇಕು ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಘೋಷಿಸುವಂತಿಲ್ಲ ಎಂದು ಹೈಕೋರ್ಟ್ ಸೂಚನೆ ನೀಡಿತ್ತು.













Got a Questions?
Find us on Socials or Contact Us and we’ll get back to you as soon as possible.