ಉಡುಪಿ : ಅಂಗನವಾಡಿಯಲ್ಲಿ ಖಾಲಿ ಇರುವ 23 ಹುದ್ದೆಗಳಿಗೆ ನೇಮಕ, ಆಸಕ್ತ ಮಹಿಳಾ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ- ಸುದ್ದಿಜಾಲ ನ್ಯೂಸ್

By | 24/12/2021

ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 4 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 23 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸದರಿ ಹುದ್ದೆಗಳು ಉಡುಪಿ ಜಿಲ್ಲೆಯಲ್ಲಿ ಖಾಲಿ ಇದ್ದು, ಅಲ್ಲಿನ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಡಿಸೆಂಬರ್ 23, 2021

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 17, 2022 ಸಂಜೆ 5.30 ರೊಳಗೆ.

ವಿದ್ಯಾರ್ಹತೆ : ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕನಿಷ್ಠ 4 ನೇ ತರಗತಿ ‌ಮತ್ತು ಗರಿಷ್ಠ 9 ನೇ ತರಗತಿ ತೇರ್ಗಡೆಯಾಗಿರಬೇಕು.

ವಯೋಮಿತಿ : ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯೋಮಿತಿ ಯೊಳಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೇನಾದರೂ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ‌.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *