ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭರ್ತಿಯಾಗದೆ ಉಳಿದ ಈ ಖಾಲಿ ಹುದ್ದೆಗಳನ್ನು ಆನ್ಲೈನ್ ಮೂಲಕ ಭರ್ತಿ ಮಾಡುವ ಪ್ರಯುಕ್ತ ಈ ಅಧಿಸೂಚನೆ ಹೊರಡಿಸಲಾಗಿದೆ.
ಅರ್ಜಿಯನ್ನು ಉಡುಪಿ ನ್ಯಾಯಾಲಯದ ವೆಬ್ಸೈಟ್ ನಲ್ಲಿ ನೀಡಲಾದ ಲಿಂಕ್ ಮೂಲಕ ಆನ್ಲೈನ್ ನಲ್ಲಿ ಸಲ್ಲಿಸತಕ್ಕದ್ದು. ಆನ್ ಲೈನ್ ಹೊರತು ಪಡಿಸಿ, ಖುದ್ದಾಗಿ ಅಂಚೆ ಮೂಲಕ ಅಥವಾ ಇನ್ನಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ : 30-09-2021 ( 11:59 ಘಂಟೆ)
ಭಾರತೀಯ ಸ್ಟೇಟ್ ಬ್ಯಾಂಕ್ ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 04-10-2021
ಹುದ್ದೆ: ಶೀಘ್ರಲಿಪಿಗಾರರು ( stenographer)
ಹುದ್ದೆ ಸಂಖ್ಯೆ : 08
ವಯೋಮಿತಿ : ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ಪೂರೈಸತಕ್ಕದ್ದು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗ 35 ವರ್ಷ, 2 ಎ, 2 ಬಿ, 3 ಎ, 3 ಬಿ 38 ವರ್ಷ, ಪ.ಜಾತಿ, ಪ.ಪಂಗಡ , ಪ್ರವರ್ಗ -1 40 ವರ್ಷ. ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಗರಿಷ್ಠ ವಯಸ್ಸನ್ನು ಮೀರಿರಬಾರದು.
ಅರ್ಜಿ ಶುಲ್ಕ : ಸಾಮಾನ್ಯ ವರ್ಗ, ಪ್ರ ವರ್ಗ 1, ಪ್ರವರ್ಗ 2, 2 ಬಿ, 3 ಎ ಮತ್ತು 3 ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.200/-,ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.100/-, ಅಂಗವಿಕಲ ಅಭ್ಯರ್ಥಿಗಳಿಗೆ ರೂ.100/-
ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ಕ್ಲಿಕ್ ಮಾಡಿ









Got a Questions?
Find us on Socials or Contact Us and we’ll get back to you as soon as possible.