ಸೆ.30 ರಂದು ಉಡುಪಿಯಲ್ಲಿ ಉದ್ಯೋಗಮೇಳ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಣಿಪಾಲ ರಜತಾದ್ರಿಯ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸೆ.30 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಅನೇಕ‌ ಕಂಪನಿ ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಉದ್ಯೋಗಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಖಾಸಗಿ ವಲಯದಲ್ಲಿನ ಉದ್ಯೋಗಕ್ಕೆ ಆಸಕ್ತರಿರುವ ಎಸ್ ಎಸ್ ಎಲ್ ಸಿ, ಪಿಯುಸಿ, ಯಾವುದೇ ಪದವಿ, ಡಿಪ್ಲೊಮಾ, ‌ಐಟಿಐ, ಸ್ನಾತಕೋತ್ತರ ಹಾಗೂ ಕ್ಷೇತ್ರಕ್ಕೆ ಸಂಬಂಧಿಸಿದ ವಿದ್ಯಾರ್ಹತೆಯನ್ನು ಹೊಂದಿದ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9945856670 ಸಂಪರ್ಕಿಸುವಂತೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡುವಂತೆ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

error: Content is protected !!