ಒಂದರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಡಿಡಿ ಚಂದನಾದಲ್ಲಿ ವೀಡಿಯೋ ಪಾಠ

By | 22/06/2021

ಹೊಸದಾಗಿ ಶಿಕ್ಷಣ ನೀತಿ ಜಾರಿಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಕ ತರಬೇತಿ ಸಂಸ್ಥೆಗಳು ಬಲಿಷ್ಠವಾಗಬೇಕು ಎಂಬ ನಿಟ್ಟಿನಲ್ಲಿ ತರಬೇತಿ ಹಾಗೂ ಸಂಶೋಧನಾ ಸಂಸ್ಥೆಗಳು ಶಿಕ್ಷಣ ಗುಣಮಟ್ಟ ಸುಧಾರಣೆಗೆ ಹೆಚ್ಚು ಗಮನಹರಿಸಲು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಡಿಎಸ್ ಇಆರ್ ಟಿ ಸಂಸ್ಥೆಯು ಶಿಕ್ಷಣ ಸಂಶೋಧನೆಯಲ್ಲಿ ಪ್ರಧಾನವಾದ ಜವಾಬ್ದಾರಿ ಹೊಂದಿದ್ದು, ಈ ಸ್ವಾಯತ್ತ ಸಂಸ್ಥೆ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲು ಸಂಶೋಧನಾ ವಿದ್ವಾಂಸರ ಸೇವೆಯನ್ನು ಪಡೆಯಲು ಆಲೋಚಿಸಲಾಗಿದೆ ಎಂದು ಸಚಿವರು ಹೇಳಿದರು.

ಜುಲೈ 1 ರಿಂದ ದೂರದರ್ಶನದ ಚಂದನಾ ವಾಹಿನಿಯ ಮೂಲಕ ಒಂದರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿದಿನ ವಿಡಿಯೋ ಪಾಠಗಳನ್ನು ಪ್ರಸಾರ ಮಾಡಲಾಗುವುದು. ಕನ್ನಡ, ಇಂಗ್ಲಿಷ್ ಮತ್ತು ಉರ್ದು ಮಾಧ್ಯಮದ ಪಾಠಗಳನ್ನು ಪ್ರಸಾರ ಮಾಡಲಿದೆ. ತರಗತಿಗಳ ಸಮಯ ಬೆಳಗಿನ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ. ತರಗತಿವಾರು ವೇಳಾಪಟ್ಟಿ ನಿಗದಿಪಡಿಸಲಾಗಿದೆ. ಯೂಟ್ಯೂಬ್ ನಲ್ಲಿ ಮರಾಠಿ ಮಾಧ್ಯಮದ ಪಾಠಗಳನ್ನು ಅಪ್ ಲೋಡ್ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.