‘ವೀಡಿಯೋಗ್ರಾಫಿ’ ‘ ಫೋಟೋಗ್ರಾಫಿ’ಯಲ್ಲಿ ನಿಮಗೆ ಆಸಕ್ತಿ ಇದೆಯೇ ? ನಿಮಗಿದೆ ಇಲ್ಲಿ ಉಚಿತ ತರಬೇತಿ : ಈ ಕೂಡಲೇ ಅರ್ಜಿ ಸಲ್ಲಿಸಿ

ಹಾವೇರಿ : ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ 30 ದಿನಗಳ ಫೋಟೋಗ್ರಾಫಿ ಮತ್ತು ವೀಡಿಯೋಗ್ರಾಫಿ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ಈ ತರಬೇತಿ ಸ್ವ ಉದ್ಯೋಗ ಪ್ರಾರಂಭಿಸಿ, ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ. ತರಬೇತಿ ಸಮಯದಲ್ಲಿ ಊಟ ವಸತಿ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ, ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಹಾಗೂ ಯೋಜನಾ ವರದಿ ತಯಾರಿಕೆ ಬಗೆಗಿನ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.

ಆಸಕ್ತರು 25-12-2021 ರೊಳಗಾಗಿ ತಮ್ಮ ವಿಳಾಸ ಹಾಗೂ ಹೆಸರನ್ನು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಅಥವಾ ದೂರವಾಣಿ ಸಂಖ್ಯೆ 0824-295307, 220807, 9483485489, 9482188780, 9743321062 ಗೆ ಸಂಪರ್ಕಿಸಬಹುದು.

error: Content is protected !!