ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಹುದ್ದೆಗೆ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ

By | 12/08/2021

ಕರ್ನಾಟಕ ಲೋಕಸೇವಾ ಆಯೋಗವು 2016 ನೇ ಸಾಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿನ ಹುದ್ದೆಗಳಿಗೆ ಸಂಬಂಧಿಸಿದಂತೆ ಇದೀಗ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಲಾಖೆಯಲ್ಲಿನ ಅಧೀಕ್ಷಕರು ದರ್ಜೆ – 1 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಸದರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು ಕೆಪಿಎಸ್ ಸಿ ( KPSC ) ವೆಬ್ಸೈಟ್ ಗೆ ಭೇಟಿ ನೀಡಿ ಹೆಚ್ಚುವರಿ ಆಯ್ಕೆಪಟ್ಟಿ ಚೆಕ್ ಮಾಡಲು ಹೇಳಲಾಗಿದೆ.

76 ಅಧೀಕ್ಷಕರ ದರ್ಜೆ- 1 ಹುದ್ದೆಗೆ ( 2016 ನೇ ಸಾಲಿನ) ಅಂತಿಮ ಆಯ್ಕೆ ಪಟ್ಟಿಯನ್ನು ದಿನಾಂಕ 01-01-2019 ರಂದು ಪ್ರಕಟಿಸಿತ್ತು. ವರ್ಗಾವಾರು ಮೀಸಲಾತಿಗೆ ಅನುಗುಣವಾಗಿ ಅಭ್ಯರ್ಥಿಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಲಾದ ರಾಜ್ಯಪತ್ರದ ನೋಟಿಫಿಕೇಶನ್ ನೋಡಿ.

Leave a Reply

Your email address will not be published. Required fields are marked *